ಉಪ್ಪಿನಂಗಡಿ : ‘ಉಬಾರ್ ಕಪ್’ ಕ್ರಿಕೆಟ್ ಪಂದ್ಯಾಕೂಟದಲ್ಲಿ ಅಂಪೈರ್ ಮೇಲೆ ಹಲ್ಲೆಗೆ ಮುಂದಾದ ಯುವಕರು – ವೀಡಿಯೋ ವೈರಲ್

Advertisement

ಉಪ್ಪಿನಂಗಡಿ, ಡಿ. 15 : ಉಪ್ಪಿನಂಗಡಿಯಲ್ಲಿ ನಡೆದ ಹೊನಲು ಬೆಳಕಿನ ‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ತೀರ್ಪುಗಾರನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisement

ಡಿ. 14ರಂದು ಆಯೋಜಿಸಲಾಗಿದ್ದ ‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯಾಟದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಕಾನಾ ಹಾಗೂ ಕೆಜಿಎಫ್ ತಂಡಗಳ ನಡುವೆ ನಡೆಯುತ್ತಿದ್ದ ಸೆಮಿಫೈನಲ್ ಪಂದ್ಯಕ್ಕೆ ಮಂಗಳೂರಿನ ರೋಲನ್ ಪಿಂಟೋ ಅವರು ತೀರ್ಪುಗಾರರಾಗಿದ್ದರು. ಪಂದ್ಯಾಟದ ವೇಳೆ ಎಲ್‌ಬಿಡಬ್ಲ್ಯೂ (LBW) ತೀರ್ಪನ್ನು ನಿಯಮಾನುಸಾರ ನೀಡಿದ್ದ ರೋಲನ್ ಪಿಂಟೋ ಅವರ ತೀರ್ಪನ್ನು ಪ್ರಶ್ನಿಸಿ, ಹೊರಗಿನಿಂದ ಬಂದ ಕೆಲ ಯುವಕರು ಮೈದಾನಕ್ಕೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೀಡಿಯೋ ಪ್ರೇಕ್ಷಕರೋರ್ವರ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು, ಪಂದ್ಯಾಟ ಕೈತಪ್ಪುವ ಹಂತಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ಸಂಶಯಕ್ಕೆ ಕಾರಣವಾಗಿದೆ. ಸೆಮಿಫೈನಲ್ ಪಂದ್ಯಾಟದ ವೇಳೆ ವ್ಯಾಪಕ ಬೆಟ್ಟಿಂಗ್ ನಡೆದಿರುವ ಸಾಧ್ಯತೆ ಇದ್ದು, ಕೆಲ ಯುವಕರ ಬೆಟ್ಟಿಂಗ್ ವಿಫಲವಾದ ಹಿನ್ನೆಲೆಯಲ್ಲಿ ತೀರ್ಪುಗಾರನ ಮೇಲೆ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.

Advertisement

ಕರಾವಳಿ ಭಾಗದಲ್ಲಿ ಇತ್ತೀಚೆಗೆ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟಗಳು ಹೆಚ್ಚಾಗಿ ನಡೆಯುತ್ತಿದ್ದು, ಇಂತಹ ಪಂದ್ಯಗಳಲ್ಲಿ ಅಕ್ರಮ ಬೆಟ್ಟಿಂಗ್ ಕೂಡ ಜೋರಾಗಿದೆ ಎನ್ನುವ ಶಂಕೆ ಕೂಡಾ ದಟ್ಟವಾಗಿದೆ. ಇದಕ್ಕೆ ಪುರಾವೆಯೆಂಬಂತೆ ನಿನ್ನೆಯ ಘಟನೆಯನ್ನು ತಳುಕು ಹಾಕಲಾಗುತ್ತಿದೆ. ಸ್ಥಳೀಯ ಕ್ರಿಕೆಟ್ ಪಂದ್ಯಾಕೂಟದಲ್ಲಿ ನಡೆದ ಈ ಘಟನೆಯು ಕ್ರೀಡಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವ ಸಾಧ್ಯತೆ ಇದ್ದು, ಪೊಲೀಸರು ಪ್ರಕರಣದ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ