ಉಪ್ಪಿನಂಗಡಿ : ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಓರ್ವ ಆರೋಪಿ ಸೆರೆ

ಉಪ್ಪಿನಂಗಡಿ, ಜ. 06 : ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸಲಾಗುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿರುವ ಘಟನೆ ಕಜೆಕ್ಕಾರ್ ಗುಡ್ಡ ಎಂಬಲ್ಲಿ ನಡೆದಿದೆ. ಮೂರು ಕೋಳಿ, ಮೂರು ದ್ವಿಚಕ್ರ ವಾಹನ ಸಹಿತ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಉರುವಾಲು ಗ್ರಾಮದ ನೋಣಯ್ಯ ಮುಗೇರ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ.

ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ ಬಳಸಲಾಗಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.