ಉಡುಪಿ : ಸ್ನೇಹಿತನನ್ನು ಬಸ್ ನಿಲ್ದಾಣಕ್ಕೆ ಬಿಟ್ಟು ವಾಪಸ್ಸಾಗುವಾಗ ಬೈಕ್ ಅಪಘಾತ : ಸವಾರ ಸಾವು

Advertisement

ಉಡುಪಿ : ಸವಾರನ ನಿಯಂತ್ರಣ ತಪ್ಪಿ ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ.

Advertisement

ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹುಟ್ಟೂರು ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದು, ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ತೆರಳಿದ್ದರು. ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೊಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸಚಿನ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯೊವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ