ಉಡುಪಿ : ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ – ಅನಿತಾ ಕಾಸರಗೋಡು ಉಡುಪಿಯಲ್ಲೂ ದೂರು ದಾಖಲು

Advertisement

ಉಡುಪಿ, ಜೂ. 09 : ಬಿಲ್ಲವ, ಬಂಟ ಸಮುದಾಯ ಹಾಗೂ ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಅಶ್ಲೀಲ ಮತ್ತು ಜಾತಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

Advertisement

ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ(ರಿ) ಉಡುಪಿ ಘಟಕ ಪದಾಧಿಕಾರಿಗಳು ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿ ಪ್ರಭಾರ ಇನ್ಸೆಕ್ಟರ್ ಮಹೇಶ್ ಪ್ರಸಾದ್‌ ಅವರಿಗೆ ದೂರು ಸಲ್ಲಿಸಿದ್ದಾರೆ. ಅನಿತಾ ಕಾಸರಗೋಡು ಎಂಬ ಮಹಿಳೆಯವರು ಬಿರುವೆ‌ರ್ ಕುಡ್ಲ ಸಂಸ್ಥೆಯ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ. ಅಲ್ಲದೆ ಜಿಲ್ಲೆಯ ಪ್ರಮುಖ ಬಿಲ್ಲವ ಹಾಗೂ ಬಂಟ ಸಮುದಾಯಗಳ ವಿರುದ್ಧವೂ ಜಾತಿ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

Advertisement

ಇಂತಹ ಹೇಳಿಕೆಗಳು ಅತ್ಯಂತ ಆಕ್ಷೇಪಾರ್ಹ, ಖಂಡನೀಯವಾಗಿದ್ದು, ಸಂಬಂಧಿತ ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ. ಹಾಗಾಗಿ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಿತ ವ್ಯಕ್ತಿಯ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ