ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಪತ್ನಿ, ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದ 65 ವಯಸ್ಸಿನ ಪತಿ – ರಕ್ಷಣೆ !

Advertisement

ಉಡುಪಿ, ಜೂ. 04 : ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.

Advertisement

ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ(60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.

Advertisement

ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.

ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ