ಉಡುಪಿ : ರಸ್ತೆ ಬದಿಯ ಕಾಂಪೌಂಡ್‌ಗೆ ಸ್ಕೂಟರ್ ಡಿಕ್ಕಿ – ತಾಯಿ ಸಾವು, ಪುತ್ರನಿಗೆ ಗಂಭೀರ

Advertisement

ಉಡುಪಿ, ಮಾ. 14 : ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮೃತಪಟ್ಟು, ಪುತ್ರ ಗಂಭೀರ ಗಾಯಗೊಂಡಿರುವ ಘಟನೆ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.

Advertisement

ಮೃತರನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ತಾಯಿ ಮತ್ತು ಮಗ ಚಲಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ಹೆಲೆನ್ ಅವರಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ