ಉಡುಪಿ : ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಗುಂಡಿಕ್ಕಿ ಉದ್ಯಮಿಯ ಭೀಕರ ಹತ್ಯೆ !

ಉಡುಪಿ, ಜು. 31 : ಜಿಲ್ಲೆಯ ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ವೇಳೆ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಐವನ್ ರಿಚಾರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ.

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಹತ್ಯೆಯ ಹಿಂದಿನ ಕಾರಣ ಏನು ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆ ಹಾಗೂ ಹತ್ಯೆಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !