ಬೆಳ್ತಂಗಡಿ : ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿ ತಿಂಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ, ಮಾ. 30 : ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ.

Advertisement

ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುದೀಪ್ ರೈ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರು, ಆದರೆ ರವಿವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕೆಲಸದಲ್ಲಿದ್ದ, ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಜೊತೆ ಮನೆಯವರಿಗೆ ತಿಳಿಸದೆ ಫೆ.17 ರಂದು ವಿವಾಹ ನೋಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಪತ್ನಿಯ ಮನೆಯಲ್ಲಿ ಮಾ.17ರಂದು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಕಾರಣ ಬಯಲಾಗಬೇಕಿದೆ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.