ಉಜಿರೆ : ಶ್ರೀ ಜನಾರ್ಧನ ದೇವಸ್ಥಾನದಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯೆಡೆಗೆ ಸಹಸ್ರಾರು ಭಕ್ತರಿಂದ ಪಾದಯಾತ್ರೆ ಆರಂಭ

Advertisement

ಉಜಿರೆ : ಜಗದ್ವಿಖ್ಯಾತಿ ಪುಣ್ಯಕ್ಷೇತ್ರ ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಇಂದು ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ಶ್ರೀ ಮಂಜುನಾಥೇಶ್ವರ ಪಾದಯಾತ್ರೆ ಸಮಿತಿ ವತಿಯಿಂದ 13ನೇ ವರ್ಷದ ಪಾದಯಾತ್ರೆಯು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ವಠಾರದಿಂದ ಆರಂಭಗೊಂಡಿದೆ.

Advertisement

ಶ್ರೀ ಜನಾರ್ಧನ ದೇವಸ್ಥಾನದ ವಠಾರದಿಂದ ವೈಭವದ ಪಾದಯಾತ್ರೆಗೆ ಚಾಲನೆ ದೊರೆತಿದೆ. ಸಹಸ್ರಾರು ಭಕ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಉಜಿರೆ-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರೆ ಸಾಗಿ, ಧರ್ಮಸ್ಥಳ ದೇವಸ್ಥಾನಕ್ಕೆ ತಲುಪಲಿದೆ. ಈ ಸಂದರ್ಭ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಶ್ರೀ ಪ್ರತಾಪ್ ಸಿಂಹ್ ನಾಯಕ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ