ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

ಉಜಿರೆ, ಫೆ.21 : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026ನೇ ಮಾರ್ಚ್ 3ರಿಂದ ಮಾರ್ಚ್ 11 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಅಡಳಿತಮೊತ್ತೇಸರರಾಗಿದ್ದ ಕೀರ್ತಿಶೇಷ ಶ್ರೀ ಯು. ವಿಜಯರಾಘವ ಪಡೈಟ್ನಾಯರ ಕನಸು ಮತ್ತು ಸಂಕಲ್ಪದಂತೆ ಭಕ್ತರ ಸಹಕಾರದಿಂದ ನೂತನವಾದ ರಾಜಗೋಪುರ “ವಿಜಯಗೋಪುರ” ನಿರ್ಮಾಣವಾಗಿದೆ. ಇದರ ಲೋಕಾರ್ಪಣೆ ಕಾರ್ಯಕ್ರಮ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣಪಡ್ವೆಟ್ನಾಯರು ತಿಳಿಸಿದ್ದಾರೆ.

Advertisement

ಈ ಬಗ್ಗೆ ಉಜಿರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಾರ್ಚ್ 2ರಂದು ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ನಡೆಯಲಿದೆ. ಅಂದು ಪರಮಪೂಜ್ಯ ಶ್ರೀ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿಯವರು ಹಂಗಾರಕಟ್ಟೆ ಇವರು ಅಶೀರ್ವಚನ ನೀಡಲಿದ್ದಾರೆ. ಮಾರ್ಚ್ 4ರಂದು ಎಡನೀರು ಮಠದ ಶ್ರೀಗಳ ಸಮ್ಮುಖದಲ್ಲಿ ಧರ್ಮಸ್ಥಳದ ಪರಮಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರು ವಿಜಯಗೋಪುರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮಾರ್ಚ್ 8ರಂದು ಉಜಿರೆಯ ಕಿರಣ್ ರಾವ್ ಮತ್ತು ಕುಟುಂಬದವರು ದೇವರಿಗೆ ಸಮರ್ಪಿಸುವ ನೂತನ ಬ್ರಹ್ಮರಥದ ಸಮರ್ಪಣೆ ಮತ್ತು ಬೆನಕ ಕನ್‌ಸ್ಟ್ರಕ್ಷನ್ಸ್‌ನ ಶ್ರೀ ಗಣೇಶ್ ಗೌಡ ಮತ್ತು ಕುಟುಂಬದವರು ದೇವರಿಗೆ ಸಮರ್ಪಿಸುವ ನೂತನ ಪುಷ್ಪರಥದ ಸಮರ್ಪಣೆಯು ಉಡುಪಿ ಪುತ್ತಿಗೆ ಮಠದ ಉಭಯ ಶ್ರೀಗಳ ಅಮೃತಹಸ್ತದಿಂದ ನಡೆಯಲಿದೆ. ಮಾರ್ಚ್11ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳು, ಉಡುಪಿಯ ಶ್ರೀ ಸೋದೆಶ್ರೀಗಳು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದೆ ಎಂದರು.

ಈ ಎಲ್ಲ ಧಾರ್ಮಿಕ ಕಾರ್ಯಕ್ರಮಗಳು ತಂತ್ರಿವರೇಣ್ಯರಾದ ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಇವರ ನೇತೃತ್ವದಲ್ಲಿ ನಡೆಯಲಿದೆ. 9 ದಿನಗಳ ಕಾಲ ನಡೆಯುವ ಸಭಾಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದ್ರೆ ಡಾ|| ಸ್ವಸ್ತಿ ಶ್ರೀ ಭಟ್ಟಾರಕಚಾರು ಕೀರ್ತಿ ಶ್ರೀಗಳು, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು, ಒಡಿಯೂರು ಮಠದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು, ಶ್ರೀ ರಾಮಚಂದ್ರಾ ಪುರ ಮಠದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು, ಮಂಗಳೂರಿನ ಆದಿಚುಂಚನಗಿರಿ ಶಾಖಾಮಠದ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು, ಕನ್ಯಾಡಿಯ ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು, ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಭಾಗವಹಿಸಿ ಆಶೀರ್ವಚನವನ್ನು ನೀಡಲಿದ್ದಾರೆ. ಡಾ||ಮೋಹನ ಅಳ್ವ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಾಡಿನ ಗಣ್ಯರು ಮಹನೀಯರು ಮತ್ತು ವಿವಿಧ ಸೇವಾಕರ್ತರು ವಿಶೇಷ ಅಭ್ಯಾಗತರಾಗಿ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪ್ರತಿನಿತ್ಯ ಎರಡು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕೃಷ್ಣಾನುಗ್ರಹ ವೇದಿಕೆ ಮತ್ತು ಪ್ರಧಾನ ವೇದಿಕೆ “ಸುದರ್ಶನ”ದಲ್ಲಿ ಈಕಾರ್ಯಕ್ರಮಗಳು ನಡೆಯಲಿವೆ. ಇದರ ಜೊತೆಗೆ ಸುನಾದ ಭಜನಾ ಕುಟೀರದಲ್ಲಿ ನಿರಂತರ ಭಜನಾ ಸೇವೆ ನಡೆಯಲಿದೆ. ವಿವಿಧ ಸಂಘ ಸಂಸ್ಥೆಯವರು ಮತ್ತು ಭಕ್ತರು ಹೊರೆಕಾಣಿಕೆಯನ್ನು ಈ ಸಂದರ್ಭದಲ್ಲಿ ಸಮರ್ಪಿಸಲಿದ್ದಾರೆ. ಈ ಎಲ್ಲ ಎಲ್ಲಾ ಕಾರ್ಯಗಳು ವ್ಯವಸ್ಥಿತವಾಗಿ ನಡೆಯುವ ದೃಷ್ಟಿಯಿಂದ ಅನೇಕ ಸಮಿತಿಗಳನ್ನು ರಚಿಸಿದ್ದೇವೆ. ವಿಶೇಷವಾಗಿ ಭೋಜನ ಶಾಲೆಯ ನಿರ್ಮಾಣವಾಗಿದೆ. ರಾಜಗೋಪುರ ನಿರ್ಮಾಣ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಮಾರ್ಗದರ್ಶನದಲ್ಲಿ ಊರವರ ಮತ್ತು ಭಕ್ತರ ಸಂಪೂರ್ಣ ಸಹಕಾರದಿಂದ ಈ ಬ್ರಹ್ಮಕಲಶೋತ್ಸವವು ವಿಶೇಷ ರೀತಿಯಲ್ಲಿ ನಡೆಯಲಿದೆ. ಭಗವಂತನ ಸೇವೆ ಮಾಡುವುದಕ್ಕೆ ಭಕ್ತರಿಗೆ ಅವಕಾಶವಿದ್ದು, ಕಲಶಸೇವೆ, ಅನ್ನದಾನ ಸೇವೆ ಮತ್ತು ತ್ರಿಕರಣಪೂರ್ವಕವಾದ ಯಾವುದೇ ವಿಧವಾದ ಸೇವೆ ಮಾಡುವವರು ದೇವಸ್ಥಾನದ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ, ಬ್ರಹ್ಮಕಲಶ ಸಮಿತಿಯ ಪ್ರಧಾನ ಸಂಚಾಲಕ ಕೆ. ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಸದಲ್ಯ, ಕೋಶಾಧಿಕಾರಿ ಪ್ರಕಾಶ್ ಕುದ್ದಣ್ಣಾಯ, ಮಾಧ್ಯಮ ಸಂಚಾಲಕ ಭಾಸ್ಕರ ಹೆಗ್ಡೆ, ಸಂಚಾಲಕ ಮೋಹನ ಶೆಟ್ಟಿಗಾರ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಸುರಭಿ, ಸಲಹೆಗಾರ ವೆಂಕಟ್ರಮಣ ಶೆಟ್ಟಿ ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂದಾರು : ಚಾಮುಂಡೇಶ್ವರಿ ದೇವಸ್ಥಾನ ಆರಿಕೋಡಿ ಇದರ ವತಿಯಿಂದ 3ನೇ ವರ್ಷದ ಮಹಿಳೆಯರ ಮ್ಯಾಟ್ ಕಬಡ್ಡಿ – ಟೀಮ್ ಶಿವಾಜಿ ಫ್ರೆಂಡ್ಸ್ ದ್ವಿತೀಯ

⚠️ Contents are protected on this website.