ಉಳ್ಳಾಲ, ಡಿ. 18 : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಕುತ್ತಾರ್ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ.
ಗಾಯಾಳುಗಳು ವಾಮಂಜೂರು ಮತ್ತು ದೇರಳಕಟ್ಟೆ ಮೂಲದವರು ಎಂದು ತಿಳಿದು ಬಂದಿದೆ. ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಚಲಿಸುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

