ಉಳ್ಳಾಲ : ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Advertisement

ಉಳ್ಳಾಲ, ಆ. 18 : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ.

Advertisement

ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ.

Advertisement

ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’ ಹೆಸರಿನ ಬೋಟ್ ನಲ್ಲಿ ಆ. 9ರಂದು ಮೀನುಗಾರಿಕೆಗೆ ತೆರಳುವಾಗ ಭಾರಿ ಅಲೆ ಅಪ್ಪಳಿಸಿದ ಪರಿಣಾಮ ನಾರಾಯಣ ಅವರು ಸಮುದ್ರಕ್ಕೆ ಕೊಚ್ಚಿಹೋಗಿದ್ದರು. ಘಟನೆಯ ಬಳಿಕ ದೋಣಿ ಮಾಲೀಕರು ಹಾಗೂ ಕುಟುಂಬಸ್ಥರು ಕಳೆದ ಎಂಟು ದಿನಗಳಿಂದ ನಾರಾಯಣ ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದರು. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.

ಮೃತದೇಹದ ಮಹಜರು ಸೇರಿದಂತೆ ಕಾನೂನು ಪ್ರಕ್ರಿಯೆಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ