ಉಳ್ಳಾಲ : ಓಡಿದರೂ ಬೆನ್ನಟ್ಟಿ ದಾಳಿ ಮಾಡಿದ “ರಾಕ್ಷಸ ನಾಯಿ” : ವ್ಯಕ್ತಿ ಸ್ಥಳದಲ್ಲೇ ಸಾವು – ದೇಹದ ಅಂಗಾಂಗಗಳು ಚೆಲ್ಲಾಪಿಲ್ಲಿ

ಉಳ್ಳಾಲ: ನಾಯಿಯೊಂದರ ಭೀಕರ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಳ್ಳಾಲದ ಕುಂಪಲದಲ್ಲಿ ಶುಕ್ರವಾರ (ನ.14) ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ.) ಎಂದು ಗುರುತಿಸಲಾಗಿದೆ. ನಾಯಿಯ ಭೀಕರ ದಾಳಿ ಎಷ್ಟಿತ್ತೆಂದರೆ ವ್ಯಕ್ತಿಯ ಮೃತದೇಹ ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ.

Advertisement

ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್ ಬಳಿ ರಸ್ತೆ ಬದಿಯ ಅಂಗಡಿಯ ಎದುರಲ್ಲಿ ಕಳೆದ ರಾತ್ರಿ ದಯಾನಂದ ಮಲಗಿದ್ದರು. ಇವರು ಮದ್ಯಪಾನ ಸೇವಿಸಿ ಮಲಗಿದ್ದರೆನ್ನಲಾಗಿದೆ. ಮಲಗಿದ್ದ ವ್ಯಕ್ತಿಯ ಮೇಲೆ ಮುಂಜಾನೆ ವೇಳೆ ನಾಯಿ ದಾಳಿ ಮಾಡಿದೆ. ಈ ವೇಳೆ ಅಲ್ಲಿಂದ ರಸ್ತೆಯ ಮತ್ತೊಂದೆಡೆಯ ಮನೆಯತ್ತ ಓಡಿದರಾದರೂ ಬೆನ್ನಟ್ಟಿದ್ದ ನಾಯಿ ಮತ್ತೆ ದಾಳಿ ನಡೆಸಿ ಕೊಂದೇ ಬಿಟ್ಟಿದೆ.

ಬೆಳಗ್ಗಿನ ವೇಳೆ ರಸ್ತೆ ಬದಿ ಮೃತದೇಹ ಕಂಡ ಸ್ಥಳೀಯರು ಇದೊಂದು ಕೊಲೆ ಎಂದೇ ಭಾವಿಸಿದ್ದರು. ದೇಹದ ಮೇಲೆ ಕಡಿದ ರೀತಿಯ ಗಾಯಗಳು ಅಷ್ಟೊಂದು ತೀವ್ರವಾಗಿತ್ತು. ವ್ಯಕ್ತಿ ಕಣ್ಣು ಸೇರಿ ದೇಹ ಭಾಗಗಳು ಚೆಲ್ಲಾಪಿಲ್ಲಿಯಾಗಿದ್ದವು. ಸ್ಥಳಕ್ಕೆ ಆಗಮಿಸಿದ ವಿಧಿ ವಿಜ್ಞಾನ ತಜ್ಞರು ಇದೊಂದು ಪ್ರಾಣಿ ದಾಳಿ ಎಂದು ಸೂಚಿಸಿದರು. ಬಳಿಕ ಇದು ನಾಯಿಯ ದಾಳಿ ಎಂದು ಖಚಿತವಾಗಿದೆನ್ನಲಾಗಿದೆ. ಸದ್ಯ ದಾಳಿ ಮಾಡಿದ ನಾಯಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.