ಮಂಗಳೂರು : ಪ್ರಧಾನಿ ಮೋದಿಯನ್ನು ಭೇಟಿಯಾದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಬೆಳ್ತಂಗಡಿ

ಮಂಗಳೂರು : ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಲಾಯಿತು. ಇದೇ ವೇಳೆ ಬೆಳ್ತಂಗಡಿಯ ಯುವ ನಾಯಕ, ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಅವರು ಪ್ರಧಾನಿ ಮೋದಿಯನ್ನು ಬರಮಾಡಿಕೊಂಡರು.

Advertisement

ಈ ಬಗ್ಗೆ ಸಂತಸ ಹಂಚಿಕೊಂಡ ಉಮೇಶ್ ಕುಲಾಲ್ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಇಷ್ಟೊಂದು ಸನಿಹದಿಂದ ಭೇಟಿಯಾಗಲು ಸಿಕ್ಕಂತಹ ಅವಕಾಶ ಎಂದಿಗೂ ಮರೆಯಲಾಗದ ಕ್ಷಣವಾಗಿದೆ. ಹಿಂದೆ ಪ್ರಧಾನಿಯನ್ನು ಭೇಟಿಯಾಗಬೇಕೆಂಬ ಕನಸನ್ನು ನಾನು ಕಂಡಿದ್ದೆ, ಅದು ಈಗ ಸಾಕಾರವಾಗಿದೆ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಇಂತಹ ಒಂದು ಸುವರ್ಣವಕಾಶವನ್ನು ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಮುಖಂಡ ಡೇವಿಡ್ ಶೂಟೌಟ್ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

⚠️ Contents are protected on this website.