ಬೆಳ್ತಂಗಡಿ : ಮಾ. 4ರಿಂದ ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ – ಹರೀಶ್ ಪೂಂಜಾ

ಬೆಳ್ತಂಗಡಿ, ಫೆ. 24 : ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಮಂಜುನಾಸ ಭಟ್ ಅಂತರ ಇವರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ. 4ರಿಂದ 6 ರವರೆಗೆ ನಡೆಯಲಿದೆ. ಈ ಪುಣ್ಯ ಕಾರ್ಯ ಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪ್ರತಿಷ್ಠಾ ಮಹೋತ್ಸವ ಅಧ್ಯಕ್ಷ ಶಾಸಕ ಹರೀಶ್ ಪೂಂಜ ಹೇಳಿದರು.

Advertisement

ಉರುವಾಲು ಪದವಿನ ಮಹಮ್ಮಾಯಿ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ಚೆನ್ನಕೇಶವ ಮಾತನಾಡಿ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರ ಕಾರ್ಯವನ್ನು ಅಂದಾಜಿಸಲಾಗಿದ್ದು ಈಗಾಗಲೇ ದಾನಿಗಳ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆದಿದ್ದು ಉತ್ಸವಕ್ಕೆ ಎಲ್ಲರೂ ಸಹಕಾರ ನೀಡುವಂತೆ ವಿನಂತಿಸಿದರು.

ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ರಾಘವ ನಾಯ್ಕ ಜಲದುರ್ಗಾ, ಪ್ರಧಾನ ಕಾರ್ಯದರ್ಶಿ ಚಿದಾನಂದ ನಾಯ್ಕ, ಉರುವಾಲು ಮಹಮ್ಮಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ವಿನೋದ್ ನಾಯ್ಕ, ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಲ್ಕೆ, ಉರುವಾಲು ಮಹಮ್ಮಾಯಿ ಮಾರಟಿ ಸಮಾಜ ಸೇವಾ ಸಂಘ ಅಧ್ಯಕ್ಷ ಸೀತಾರಾಮ ನಾಯ್ಕ, ಗೌರವ ಸಲಹೆಗರಾದ ಸೀತಾರಾಮ ಅಳ್ವ ಕೊರಿಂಜ ಹಾಗೂ ಪ್ರಭಾಕರ ಗೌಡ ಪೊಸದೋಂಡಿ ಮತ್ತು ತಣ್ಣೀರುವಂತ ಸಿಎ ಬ್ಯಾಂಕ್ ಉಪಾಧ್ಯಕ್ಷ ಸುನೀಲ್ ಅಣಾವು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ಚೆನ್ನಕೇಶವ ಸ್ವಾಗತಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.