ಬೆಳ್ತಂಗಡಿ : ಮಾ. 04ರಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ

ಉರುವಾಲು, ಮಾ. 03 : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ, ಉರುವಾಲು ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವವು ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶಿರ್ವಾದಗಳೊಂದಿಗೆ, ಶ್ರೀ ಗಣೇಶ ತಂತ್ರಿ ಎಡಪದವು ಇವರ ನೇತೃತ್ವದಲ್ಲಿ ಹಾಗೂ ಶ್ರೀ ಮಂಜುನಾಥ ಭಟ್ ಅಂತರ ಇವರ ಮಾರ್ಗದರ್ಶನದಲ್ಲಿ ಮಾರ್ಚ್ 04 ರಿಂದ ಮಾರ್ಚ್ 06ರವರೆಗೆ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವಿಜ್ರಂಭಣೆಯಿಂದ ಜರುಗಲಿದೆ.

Advertisement

ಮಾರ್ಚ್ 04 ಬುಧವಾರ

ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಯೊಂದಿಗೆ ಆಗಮಿಸಿ ಹೊರೆಕಾಣಿಕೆ ಸಮರ್ಪಣೆ, ನೃತ್ಯ ಗಾನ ಸಂಭ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಭಾ ಕಾರ್ಯಕ್ರಮ ಜರುಗಲಿದೆ.

ಮಾರ್ಚ್ 05 ಗುರುವಾರ

ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಅಲಂಕಾರ ಸೇವೆ, ಕುಂಕುಮಾರ್ಚನೆ, ಹೂವಿನ ಪೂಜೆ, ದುರ್ಗಾ ಪೂಜೆ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು, ಸಭಾ ಕಾರ್ಯಕ್ರಮ, ಶ್ರೀ ದುರ್ಗಾ ಪರಮೇಶ್ವರಿ ಪ್ರಸಾದಿತ ದಶವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಜರುಗಲಿದೆ.

ಮಾರ್ಚ್ 06 ಶುಕ್ರವಾರ

ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಆಹ್ವಾನಿತ ತಂಡಗಳಿಂದ ಗುಮ್ಮಟೆ ಹಾಡು, ಸಭಾ ಕಾರ್ಯಕ್ರಮ, ಗೋಂದೊಳು ಪೂಜೆ ದೇವಿ ದರ್ಶನ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ.

ಉರುವಾಲು ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಎಲ್ಲಾ ಕಾರ್ಯಕ್ರಮಗಳು ನಿಮ್ಮ ನೆಚ್ಚಿನ ಧ್ವನಿ ನ್ಯೂಸ್ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.