ಕುಂದಾಪುರ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ, ವಂಚನೆ – ಆರೋಪಿಯ ಬಂಧನ

ಕುಂದಾಪುರ, ಡಿ.26 : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ, ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಬಂಧಿಸುವಲ್ಲಿ ಶಂಕರನಾರಾಯಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಗಾಂಧಿನಗರದ ಜಯಪ್ರಕಾಶ್ ಡಿ. ಬಂಧಿತ ಆರೋಪಿ.

Advertisement

ಆರೋಪಿ ರಾಯಚೂರು ಜಿಲ್ಲೆ ಚಂದ್ರಬಂಡ ಗ್ರಾಮದ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ್ದಾನೆ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಶಂಕರನಾರಾಯಣ ಪೊಲೀಸರು, ಚಿತ್ರದುರ್ಗದ ಕೋಟೆ ಪ್ರದೇಶದಿಂದ ಆರೋಪಿಯನ್ನು ವಶಕ್ಕೆ ಪಡೆದು ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.