ವಂದೇ ಮಾತರಂ ಗೀತೆಗೂ ರಾಷ್ಟ್ರಗೀತೆಯ ಗೌರವ – ಎಲ್ಲಾ ಶಾಲೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ

ಹೊಸದಿಲ್ಲಿ, ಫೆ.12 : ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.

Advertisement

ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲೆಗಳಲ್ಲಿ ರಾಷ್ಟ್ರಗೀತೆಗೂ ಮೊದಲು ‘ವಂದೇ ಮಾತರಂ’ನ 6 ಚರಣಗಳನ್ನು ಹಾಡಬೇಕು. ಹಾಗೆಯೇ ಗೀತೆಯನ್ನು ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 2025ರ ಡಿಸೆಂಬರ್‌ನಲ್ಲಿ ‘ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ನೂತನ ಆದೇಶದ ಪ್ರಕಾರ ಪದ್ಮ ಪ್ರಶಸ್ತಿಗಳು ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಹಾಗೂ ರಾಷ್ಟ್ರಪತಿಗಳು ಭಾಗವಹಿಸುವ ಎಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ಶಾಲಾ ಸಭೆಗಳಲ್ಲಿ ವಂದೇ ಮಾತರಂ ನುಡಿಸುವುದು ಕಡ್ಡಾಯವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.