ಹೊಸದಿಲ್ಲಿ : ವಂದೇ ಭಾರತ್ ಕರಾವಳಿಗೆ ವಿಸ್ತರಣೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ

ಹೊಸದಿಲ್ಲಿ, ಫೆ. 05 : ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವನ್ನು ಮನವರಿಕೆ ಮಾಡಿದರು.

Advertisement

ನವದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಜನಾರ್ದನ ಪೂಜಾರಿ, ಕರಾವಳಿ ಮತ್ತು ಬೆಂಗಳೂರು ನಡುವೆ ಪ್ರತಿದಿನ 600 ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಸಾವಿರಾರು ಪ್ರಯಾಣಿಕರನ್ನು ಕರೆದೊಯ್ಯುತ್ತವೆ. ಈ ಸ್ಥಳಗಳ ನಡುವೆ ನೂರಾರು ಖಾಸಗಿ ವಾಹನಗಳಲ್ಲೂ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ, ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಕಾರವಾರ ನಡುವೆ ಮಂಗಳೂರು ಮತ್ತು ಉಡುಪಿ ಮೂಲಕ ಅರೆ-ಹೈಸ್ಪೀಡ್ ರೈಲನ್ನು ಪರಿಚಯಿಸುವುದು ಅತ್ಯಗತ್ಯ ಎಂದು ಸಂಸದರು ಹೇಳಿದರು.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರವರ ಭೇಟಿಯಾದ ಶ್ರೀನಿವಾಸ ಪೂಜಾರಿ ಅವರು, ವಂದೇ ಭಾರತ್ ಕರಾವಳಿಗೆ ವಿಸ್ತರಣೆ, ಕೊಂಕಣ ರೈಲ್ವೆ ಹಳಿ ಡಬ್ಲಿಂಗ್ ಬಗ್ಗೆ ಪ್ರಸ್ತಾಪನೆ ಮಾಡಿದರು. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರ ಕನ್ನಡದವರೆಗೆ ವಿಸ್ತರಿಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತಿ ದಿನ ಉತ್ತರ ಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕೆಂದು ವಿನಂತಿಸಿದರು. ಅದರೊಂದಿಗೆ, ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು. ಹಲವು ವರ್ಷಗಳಿಂದ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇದೀಗ ನರೇಂದ್ರ ಮೋದಿಯವರ ಸರಕಾರದ ತುರ್ತು ಕ್ರಮಗಳಿಂದಾಗಿ ಸಾಕಷ್ಟು ಪ್ರಗತಿ ಕಂಡು ಬರುತ್ತಿದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.