ಬೆಳಗಾವಿ, ಆ. 05 : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿ ಮಂಡಿಸದ್ದನ್ನು ವಿರೋಧಿಸಿ, ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸಿದ್ದನ್ನು ಖಂಡಿಸಿ, ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಆ. 13 ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ ಎಂದು ಹಿರಿಯ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಬೆಂಬಲಿಸಿವೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಗೊತ್ತುವಳಿ ಅಂಗೀಕರಿಸದಿದ್ದರೇ, ಪಾಲಿಕೆಯನ್ನು ಸೂಪರ್ ಸೀಡ್ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಲಾಗುವುದು ಎಂದರು.
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಹಾಗೂ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಹಿತ ಕಾಪಾಡಲು ವಿಫಲರಾಗಿದ್ದಾರೆ. ಮಹದಾಯಿ ಕಳಸಾ ಬಂಡೂರಿ, ಕಾವೇರಿ, ಕೃಷ್ಣಾ ನದಿ ನೀರಾವರಿ ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರದ ಮುಂದೆ ಪ್ರಬಲ ವಾದ ಮಂಡಿಸಲು ವಿಫಲರಾಗಿದ್ದಾರೆ ಎಂದು ಕಿಡಿ ಕಾರಿದರು.


