ಮಂಗಳೂರು : ಶಾಸಕ ವೇದವ್ಯಾಸ ಕಾಮತ್, ಅವರ ಪತ್ನಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

ಮಂಗಳೂರು, ಫೆ. 07 : ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಡಲಾಗಿರುವ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದು, ಶಾಸಕರ ಪತ್ನಿಯನ್ನು ಅವಮಾನಿಸಿದ ಕುರಿತು ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಬಂಟ್ವಾಳ ತಾಲೂಕಿನ ಶರಣ್ ರೈ (29) ಎನ್ನುವಾತನ್ನು ಈ ಪ್ರಕರಣ ಸಂಬಂಧ ಪೊಲೀಸರು ಬಂಧನ ಮಾಡಿದ್ದಾರೆ.

ಶರಣ್ ರೈ ಅಮ್ಮಾಡಿ ನಿವಾಸಿಯಾಗಿದ್ದು, ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದು, ಫೇಸ್ಟುಕ್‌ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸಿರುವ ರೀತಿ ಪೋಸ್ಟ್ ಮಾಡಿದ್ದು, ಈ ಕುರಿತು ಮಹಿಳೆಯೊಬ್ಬರು ಪೊಲೀಸ್ ದೂರನ್ನು ನೀಡಿದ್ದರು.

ಈ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಕುರಿತು ಸಮಾಜದಲ್ಲಿ ಅಗೌರವ ಉಂಟಾಗಿದೆ. ಮಹಿಳೆಯರ ಕುರಿತು ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎನ್ನುವ ದೂರಿನ ಪ್ರಕಾರ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿ ಆರೋಪಿಯನ್ನು ಬಂಧನ ಮಾಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.