ವೇಣೂರು : ಕುಖ್ಯಾತ ಕಳ್ಳ “ಇತ್ತೆ ಬರ್ಪೆ” ಅಬೂಬಕ್ಕರ್ ನಿಂದ 5,65,000 ರೂ. ಬೆಲೆಬಾಳುವ ಸೊತ್ತು ವಶಕ್ಕೆ

Advertisement

ವೇಣೂರು : ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000/-ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

Advertisement

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದಾಗ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ, ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬಂಧಿತನಿಂದ ಕಳವುಗೈದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಸದ್ರಿ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ, ಬೆಳ್ತಂಗಡಿ ಡಿ.ವೈ.ಎನ್. ಪಿ. ಶ್ರೀಮತಿ ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ರವರ ತಂಡ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಶ್ರೀಮತಿ ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಹಚ್.ಸಿ. ಕೃಷ್ಣ, ಧರ್ಮಸ್ಥಳ ಠಾಣಾ ಹಚ್.ಸಿ. ಪ್ರಶಾಂತ್, ಪಿ.ಸಿ. ಚರಣ್, ವೇಣೂರು ಪೊಲೀಸ್ ಠಾಣಾ ಪಿ.ಸಿ. ಬಸವರಾಜ್, ಪಿ.ಸಿ. ಮೋಹನ್, ಮಪಿಸಿ. ಶ್ರೀಮತಿ ಜಯಶ್ರೀ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿ.ಸಿ. ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕರ್ತವ್ಯ ನಿರ್ವಹಿಸಿರುತ್ತದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ