ಮಂಗಳೂರು: ಬಿಗ್ ವ್ಹಾಲೆ ‘Vexon’ ಸಂಸ್ಥೆಯಿಂದ ತರಬೇತಿ ಹೆಸರಲ್ಲಿ ವಂಚನೆ ಆರೋಪ – ವಿದ್ಯಾರ್ಥಿಗಳಿಂದ ದೂರು

ಮಂಗಳೂರು, ಫೆ. 26 : ತರಬೇತಿ ಮತ್ತು ಉದ್ಯೋಗದ ಆಮಿಷವೊಡ್ಡಿ ಕಾಲೇಜು ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ ಎಂದು ಆರೋಪಿಸಿ ನಗರದ ‘Vexon’ ಎಂಬ ಖಾಸಗಿ ಸಂಸ್ಥೆಯ ವಿರುದ್ಧ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳು ದೂರು ದಾಖಲಿಸಿದ್ದಾರೆ.

Advertisement

ಕುದ್ರೋಳಿಯ ಶ್ರೇಯಸ್ ಸ್ವೀಟ್ಸ್ ಎದುರು ಕಾರ್ಯಾಚರಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಂಚಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಸ್ಥೆಯು ತರಬೇತಿಯ ಹೆಸರಿನಲ್ಲಿ ಪ್ರತಿ ವಿದ್ಯಾರ್ಥಿಯಿಂದ 2,000 ರೂಪಾಯಿ ಸಂಗ್ರಹಿಸುತ್ತದೆ ಮತ್ತು ಮೂರು ದಿನಗಳ ಕಾರ್ಯಕ್ರಮವನ್ನು ನಡೆಸುತ್ತದೆ. ತರಬೇತಿಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ, ಬ್ರೈನ್ ವಾಶ್ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ 51,000 ರೂಪಾಯಿ ಬೆಲೆಯ ಉತ್ಪನ್ನವನ್ನು ಖರೀದಿಸುವಂತೆ ಸೂಚಿಸಲಾಗುತ್ತದೆ. ಜೊತೆಗೆ ಆ ಉತ್ಪನ್ನವನ್ನು ಮಾರಾಟ ಮಾಡಲು ಒತ್ತಡ ಹೇರಲಾಗುತ್ತದೆ. ಒಂದು ವೇಳೆ ಉತ್ಪನ್ನ ಮಾರಾಟ ಮಾಡಲು ಸಾಧ್ಯವಾಗದಿದ್ದರೆ, ತಲಾ ಮೂವರು ಹೊಸ ವಿದ್ಯಾರ್ಥಿಗಳನ್ನು ಸಂಸ್ಥೆಗೆ ಸೇರಿಸುವ ‘ಚೈನ್ ಸಿಸ್ಟಮ್’ ಅನುಸರಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೂರಿನಲ್ಲಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ವಂಚನೆಯ ಜಾಲದಲ್ಲಿ ಸಿಲುಕಿರುವ ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ವಿದ್ಯಾರ್ಥಿನಿಯರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಇದರಿಂದ ಅವರ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಈ ಗಂಭೀರ ವಿಷಯದ ಬಗ್ಗೆ ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದು, ಎಲ್ಲರೂ ಒಟ್ಟಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಸಂಸ್ಥೆಯ ಪರವಾನಗಿ ಮತ್ತು ಕಾರ್ಯವೈಖರಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಈ ಸಂಸ್ಥೆ ಕೇವಲ ವಿದ್ಯಾರ್ಥಿಗಳನ್ನು ಮಾತ್ರವಲ್ಲ, ನಿರುದ್ಯೋಗಿಗಳನ್ನೂ ಕೂಡಾ ತನ್ನತ್ತ ಸೆಳೆದುಕೊಂಡು ವಂಚಿಸುತ್ತಿದೆ ಎಂಬ ಆರೋಪಗಳೂ ಕೇಳಿಬಂದಿದೆ. ಈಗಾಗಲೇ, ಈ ಖಾಸಗಿ ಸಂಸ್ಥೆಯ ಮಾತುಗಳನ್ನು ನಂಬಿ ಬಹಳಷ್ಟು ಮಂದಿ ಹಣ ಹಾಕಿದ್ದು, ಆ ಬಳಿಕ ಅವರಿಗೆ ಟಾರ್ಗೆಟ್ ನೀಡಲಾಗುತ್ತಿದೆ ಎಂಬ ಆರೋಪಗಳೂ ಇದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.