ಬೆಳ್ತಂಗಡಿ : ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿಹಿಂಪ ಪ್ರತಿಭಟನೆ

ಬೆಳ್ತಂಗಡಿ, ಡಿ. 09 : ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಪುತ್ತೂರು ಜಿಲ್ಲೆ ವತಿಯಿಂದ ಗೋ ಹತ್ಯೆಯನ್ನು ತಡೆಯಲು ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ ಗೋ ಹತ್ಯೆಗೆ ಸಹಕಾರ, ಫ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಬೃಹತ್ ಪ್ರತಿಭಟನೆಯು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು.

Advertisement

ಈ ಸಂದರ್ಭ ನೂತನ ಗೋ ಸಂರಕ್ಷಣಾ ತಿದ್ದುಪಡಿ ನಡೆಸಿರುವುದನ್ನು ಹಿಂಪಡೆಯಬೇಕೆಂದು ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿಹೆಚ್ ಪಿ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಟೆ, ವಿಹೆಚ್ ಪಿ ಕಾರ್ಯದರ್ಶಿ ನವೀನ್ ನೆರಿಯ, ವಿಹೆಚ್ ಪಿ ಗೋ ರಕ್ಷಕ್ ಪ್ರಮುಖ್ ಗಣೇಶ್ ಕಳೆಂಜ, ಜಿಲ್ಲೆಯ ಸಹ ಸಾಯೋಜಕ ದಿನೇಶ್ ಚಾರ್ಮಾಡಿ, ಸತೀಶ್ ನೆರಿಯ, ರಮೇಶ್ ಮುಂಡತ್ತೋಡಿ, ನಾಗೇಶ್ ಕಲ್ಮಂಜ, ಸುಧೀರ್ ಚಾರ್ಮಾಡಿ, ಶಶಿರಾಜ್ ಗುರುವಾಯನಕೆರೆ, ಶರತ್ ಶೆಟ್ಟಿ ಸಂಘ ಪರಿವಾರದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.