ಬಂಟ್ವಾಳ : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಪರ ವಕಾಲತ್ತು ವಹಿಸದಂತೆ ವಕೀಲರ ಸಂಘಕ್ಕೆ ವಿಹಿಂಪ-ಬಜರಂಗದಳ ಮನವಿ !

Advertisement

ಬಂಟ್ವಾಳ, ಜು. 17 : ಬಿಸಿರೋಡ್‌ ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಬಾಲಕಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಪರವಾಗಿ ಯಾವುದೇ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಕೋರಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಂಟ್ವಾಳ ವಕೀಲರ ಸಂಘಕ್ಕೆ ಇಂದು ಮನವಿ ಸಲ್ಲಿಸಲಾಯಿತು.

Advertisement

ಮನವಿಯಲ್ಲಿ, ಲಾವಣ್ಯ ಹತ್ಯೆ ಪ್ರಕರಣವನ್ನು ಅತ್ಯಂತ ಕ್ರೂರ ಮತ್ತು ಖಂಡನೀಯ ಕೃತ್ಯ ಎಂದು ಉಲ್ಲೇಖಿಸಿ, ಇಂತಹ ಗಂಭೀರ ಪ್ರಕರಣದ ಆರೋಪಿಯ ಪರವಾಗಿ ವಕಾಲತ್ತು ವಹಿಸದಂತೆ ನ್ಯಾಯವಾದಿಗಳಿಗೆ ಮನವಿ ಮಾಡಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡದ ಪದಾಧಿಕಾರಿಗಳು ಹಾಗೂ ಪುತ್ತೂರು ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ