ಬೆಳ್ತಂಗಡಿ : ಮದುವೆ ಆಗುವುದಾಗಿ ನಂಬಿಸಿ ಯುವತಿಯ ಖಾಸಗಿ ವೀಡಿಯೋ ವೈರಲ್ – ಪ್ರಕರಣ ದಾಖಲು

ಬೆಳ್ತಂಗಡಿ, ಮಾ. 24 : ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಬೆಳೆಸಿ ಮದುವೆಯ ಭರವಸೆ ನೀಡಿ ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ವಾಟ್ಸಾಪ್ ಮೂಲಕ ಹಂಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿತ ಸುಶಾಂತ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಪಿರ್ಯಾದುದಾರರಾದ 20 ವರ್ಷದ ಯುವತಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿಯಾಗಿದ್ದು, ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿತ ಸುಶಾಂತ್ ಪೂಜಾರಿ ಇನ್‌ಸ್ಟ್ರಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಿರ್ಧರಿಸಿದ್ದಾಗಿ ಹೇಳಲಾಗಿದೆ.

ಈ ನಡುವೆ, ಆರೋಪಿ ಯುವತಿಯನ್ನು ನಗ್ನವಾಗಿ ವಿಡಿಯೋ ಕಾಲ್ ಮಾಡಲು ಒತ್ತಾಯಿಸಿ, ಮದುವೆಯ ಭರವಸೆ ನೀಡಿದ್ದರಿಂದ ಆತನ ಮೇಲಿನ ನಂಬಿಕೆಯಿಂದ ಯುವತಿ ವಿಡಿಯೋ ಕಾಲ್‌ನಲ್ಲಿ ಭಾಗವಹಿಸಿದ್ದಾಳೆ. ಆದರೆ ಬಳಿಕ ಆರೋಪಿ ಆ ಖಾಸಗಿ ವಿಡಿಯೋವನ್ನು ವಾಟ್ಸಾಪ್ ಮೂಲಕ ಇತರರಿಗೆ ಹಂಚಿದನೆಂದು ದೂರಿನಲ್ಲಿ ಆರೋಪಿಸಲಾಗಿದೆ. ಆರೋಪಿತನ ಸಹೋದರಿಯರೂ ಈ ಕೃತ್ಯಕ್ಕೆ ಸಹಕರಿಸಿದ್ದಾಗಿ ತಿಳಿದುಬಂದಿದೆ.

ಘಟನೆ 01.10.2025 ರಿಂದ 16.03.2026ರ ನಡುವೆ ನಡೆದಿದ್ದು, ಈ ವಿಷಯ ಯುವತಿಗೆ 16.03.2026 ರಂದು ತಿಳಿದು ಬಂದಿದೆ. ನಂತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ, 24.03.2026 ರಂದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸರು ಎಸ್‌ಸಿ/ಎಸ್‌ಟಿ ಅಟ್ಟಹಾಸ ತಡೆ ಕಾಯ್ದೆಯ ವಿವಿಧ ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪೊಲೀಸರು ಆರೋಪಿತರ ಬಂಧನಕ್ಕೆ ಕ್ರಮ ಕೈಗೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.