ಕಾರ್ಕಳ : ಕಾಲೇಜ್ ನಲ್ಲೇ 16 ವರ್ಷದ ವಿದ್ಯಾರ್ಥಿ  ತಪ್ಪಿ ಬಿದ್ದು ಮೃತ್ಯು

Advertisement

ಕಾರ್ಕಳ, ಆ. 22 : ಉಡುಪಿ ಜಿಲ್ಲೆಯ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ಚಿರಾಗ್ ಎ.ಎಂ. ಅವರು ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ತಿಪಟೂರು ಮೂಲದ ಎ.ಆರ್. ಮಂಜುನಾಥ್ ಅವರ ಪುತ್ರ ಚಿರಾಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.

ಆಗಸ್ಟ್ 21ರಂದು ಬೆಳಿಗ್ಗೆ 7.30ರ ಸುಮಾರಿಗೆ ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ತಕ್ಷಣ ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಿಗ್ಗೆ 11.30ರ ಸುಮಾರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು.

ವೈದ್ಯರು ಪರೀಕ್ಷಿಸಿದಾಗ ಚಿರಾಗ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ