ಪುತ್ತೂರು : ಬೆಳ್ತಂಗಡಿಯ ವಿದ್ಯಾರ್ಥಿಯೋರ್ವನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು

Advertisement

ಪುತ್ತೂರು, ಏ. 23 : ಬೆಳ್ತಂಗಡಿಯ ವಿದ್ಯಾರ್ಥಿಯೋರ್ವನಿಗೆ ಹಲ್ಲೆ ನಡೆಸಿದ ಆರೋಪದಡಿ ಪುತ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Advertisement

ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವರು ಪುತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿಯಾಗಿದ್ದಾರೆ. ಏ.22ರಂದು ಸಂಜೆ ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಅವರು ಚಹಾ ಕುಡಿಯುತ್ತಿರುವಾಗ ಅವರ ಪರಿಚಯದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಹಲ್ಲೆ ನಡೆಸಿದ್ದಾರೆ. ಆಗ ಆದಿಲ್ ಹುಸೈನ್ ಅವರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದಾರೆ.

Advertisement

ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಆದಿಲ್ ಅವರಿಗೆ ಅವ್ಯಾಚವಾಗಿ ಬೈದು ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿದ್ದಾರೆ. ಹಲ್ಲೆಯಿಂದಾದ ಗಾಯಕ್ಕೆ ಆದಿಲ್ ಅವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕೆಲವು ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಆದಿಲ್ ಬಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ