ಬೆಳ್ತಂಗಡಿ : ಮುಸುಕುಧಾರಿಗಳಿಂದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

ಬೆಳ್ತಂಗಡಿ : ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

Advertisement

ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ವಿದ್ಯಾರ್ಥಿನಿ ಎಂದಿನಂತೆ ಫೆ.9 ರಂದು ಬೆಳಗ್ಗೆ ಸುಮಾರು 8:30 ಕ್ಕೆ ಸ್ಕೂಟರ್ ನಲ್ಲಿ ಬಸ್ ಗಾಗಿ ತೆರಳುವ ವೇಳೆ ಅಪರಿಚಿತ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ಕಾರಿನೊಳಗೆ ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ವಿರೋಧ ವ್ಯಕ್ತಪಡಿಸಿ, ಬೊಬ್ಬೆ ಹೊಡೆದು ವಿದ್ಯಾರ್ಥಿನಿ ಹೊರಬಂದಾಗ ಹಿಂಭಾಗದಿಂದ ಸ್ಕೂಟರ್ ವೊಂದು ಬರುವುದನ್ನು ಕಂಡ ದುಷ್ಕರ್ಮಿಗಳು ವಿದ್ಯಾರ್ಥಿನಿಗೆ ಚೂರಿಯಿಂದ ಕೈಗೆ ಗಾಯಗೊಳಿಸಿ, ಆಕೆಯ ಕಾಲೇಜ್ ಬ್ಯಾಗ್ ಕಸಿದುಕೊಂಡು ಕಾರಿನೊಂದಿಗೆ ಪರಾರಿಯಾಗಿದ್ದಾರೆನ್ನಲಾಗಿದೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.