ಸುಳ್ಯ : ಇಲಿಪಾಷಾಣ ಸೇವಿಸಿದ್ದ 19 ವರ್ಷದ ವಿದ್ಯಾರ್ಥಿನಿ ಸಾವು

Advertisement

ಸುಳ್ಯ : ಇಲಿಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

Advertisement

ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ. ಮೃತ ಯುವತಿ ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

Advertisement

ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ತಾಳ್ಮೆಯಿಂದಿದ್ದರೆ, ಯಾವುದೇ ಸನ್ನಿವೇಶವನ್ನು ಎದುರಿಸಬಹುದು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ