ಉಡುಪಿ, ಆ. 10 : ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಭಗವತಿ ಟೂರಿಸ್ಟ್ ಬಸ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ, ಸಾಮಾಜಿಕ ಧುರೀಣ ವಿನಯ್ ರಾಜ್ (51) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ (ಆ.10) ಬೆಳಗ್ಗೆ ನಿಧನ ಹೊಂದಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾಳೆ.
ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.




