ಚೀನಾ : ಭಾರತೀಯ ಯುವತಿಗೆ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಿದ ಚೀನಾ ಅಧಿಕಾರಿಗಳು

ಚೀನಾ : ಯುಕೇ ವಾಸಿ ಪೆಮ್ ವ್ಯಾಂಗ್ ತೋಂಗ್‌ಡೋಕ್ ಅವರನ್ನು ಚೀನಾದ ಶಾಂಘೈ ಪುಡೋಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು 18 ಗಂಟೆಗಳ ಕಾಲ ವಶಕ್ಕೆ ತೆಗೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ತೋಂಗ್‌ಡೋಕ್ ತಮ್ಮ ಎಕ್ಸ್‌ ಖಾತೆಯ ಮೂಲಕ ಪೋಸ್ಟ್‌ ಹಾಕಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

Advertisement

ಅರುಣಾಚಲ ಪ್ರದೇಶದಲ್ಲಿ ಜನಿಸಿ ಭಾರತೀಯ ಪಾಸ್‌ಪೋರ್ಟ್ ಹೊಂದಿರುವ ಪೆಮ್ ವ್ಯಾಂಗ್ ತೋಂಗ್‌ಡೋಕ್ ಲಂಡನ್‌ನಿಂದ ಜಪಾನ್‌ಗೆ ಪ್ರಯಾಣಿಸುತ್ತಿದ್ದ ವೇಳೆ ನವೆಂಬರ್ 21ರಂದು ಈ ಘಟನೆ ನಡೆದಿದೆ. ವಲಸೆ ವಿಭಾಗದ ತಪಾಸಣೆಯ ನಂತರ ಅಧಿಕಾರಿಗಳು ಅವರ ಪಾಸ್‌ಪೋರ್ಟ್ ಪಡೆದು, ಕೆಲವು ಕ್ಷಣಗಳ ಬಳಿಕ ಮತ್ತೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದರು. “ನಿಮ್ಮ ಜನ್ಮಸ್ಥಳ ಅರುಣಾಚಲ ಪ್ರದೇಶ ಚೀನಾದ ಭೂಭಾಗ. ಆದ್ದರಿಂದ ನಿಮ್ಮ ಭಾರತೀಯ ಪಾಸ್‌ಪೋರ್ಟ್ ಮಾನ್ಯವಲ್ಲ,” ಎಂದು ಅಧಿಕಾರಿಗಳು ತಿಳಿಸಿದರೆಂದು ತೋಂಗ್‌ಡೋಕ್ ಹೇಳಿಕೊಂಡಿದ್ದಾರೆ. ಜಪಾನ್‌ಗೆ ತೆರಳಲು ಸಿದ್ದವಾಗಿದ್ದ ತೋಂಗ್‌ಡೋಕ್ ಅವರ ಪ್ರಯಾಣವನ್ನು ತಡೆಯಲಾಗಿದೆ. ಹೊಸ ಟಿಕೆಟ್ ಖರೀದಿಸಿದರೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಚೀನೀ ಅಧಿಕಾರಿಗಳು ಸೂಚಿಸಿದರೆಂದು ಅವರು ಹೇಳಿದ್ದಾರೆ.

ಸ್ಥಳೀಯ ಸಂಪರ್ಕಗಳ ನೆರವಿನಿಂದ ತೋಂಗ್‌ಡೋಕ್ ಶಾಂಘೈಯಲ್ಲಿನ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿದರು. ಬಳಿಕ ಭಾರತೀಯ ಅಧಿಕಾರಿಗಳು ಮಧ್ಯಪ್ರವೇಶ ಮಾಡಿದ್ದು, ಅವರ ಹೊರಗಡೆ ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ: ತೋಂಗ್‌ಡೋಕ್ ಅವರು ಈ ಘಟನೆ ಕುರಿತು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ್ ಖಂಡು, ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ ಪ್ರಧಾನಿ ಕಚೇರಿಯನ್ನು ಟ್ಯಾಗ್‌ ಮಾಡಿ , “ಅರುಣಾಚಲ ಪ್ರದೇಶ ಚೀನಾದ ಭಾಗವೆಂದರೆ, ನನ್ನ ಭಾರತೀಯ ಪಾಸ್‌ಪೋರ್ಟ್ ಮಾನ್ಯವಲ್ಲವೆ? ಇದು ನಿಜವಾಗಿಯೂ ನ್ಯಾಯವೆ?” ಎಂದು ಪ್ರಶ್ನಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.