ವಿಟ್ಲ : ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಅಗ್ನಿ ಅವಘಡ – ಕ್ಷಣಾರ್ಧದಲ್ಲೇ ಹಲವು ಅಂಗಡಿಗಳಿಗೆ ವ್ಯಾಪಿಸಿದ ಬೆಂಕಿ

ವಿಟ್ಲ, ಜ.01 : ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ತಡರಾತ್ರಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಭೀಕರ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲೇ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿ, ಐದಾರು ಮಳಿಗೆಗಳು ಸುಟ್ಟು ಕರಕಲಾಗಿದೆ. ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯೊಳಗಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿಂದಾಗಿ ಜ್ವಾಲೆಯ ತೀವ್ರತೆ ಏಕಾಏಕಿ ಹೆಚ್ಚಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಸಫಲವಾಗಿಲ್ಲ. ನೋಡ ನೋಡುತ್ತಿದ್ದಂತೆ ಏಕಾಏಕಿ ಬೆಂಕಿಯ ಜ್ವಾಲೆ, ಪಕ್ಕದಲ್ಲೇ ಇದ್ದ ಸಣ್ಣಪುಟ್ಟ ಅಂಗಡಿಗಳನ್ನು ಆವರಿಸಿದೆ. ಬೆಂಕಿ ಸಮೀಪದ ಅಮಿತ್ ಹೋಟೆಲ್, ಸ್ಟಾರ್ ವೈನ್ಸ್, ಎಸ್. ಬಿ. ಟೈಲರಿಂಗ್ ಶಾಪ್, ಪಡೀಲ್ ಫಾಸ್ಟ್ ಫುಡ್ ಸಹಿತ ಸಣ್ಣ ಅಂಗಡಿಗಳೂ ಬೆಂಕಿಗೆ ಆಹುತಿಯಾಗಿದೆ.

ಬೆಂಕಿಯ ರೌದ್ರಾವತಾರಕ್ಕೆ ಸಿಲುಕಿ ಹಲವು ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಬಂಟ್ವಾಳದಿಂದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ