ಪಶ್ಚಿಮ ಬಂಗಾಳದಲ್ಲಿ ಹೊಸ ಯುಗ ಆರಂಭ : ದೀದಿ ಕೋಟೆಯಲ್ಲಿ ಸುವೇಂದು ಪಟ್ಟಾಭಿಷೇಕ !

ಕೋಲ್ಕತ್ತಾ, ಮೇ 09 : ಪಶ್ಚಿಮ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ, ಬಂಗಾಳ ನೆಲದ ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಶನಿವಾರ (ಮೇ 09) ಪ್ರಮಾಣ ವಚನ ಸ್ವೀಕರಿಸಿದರು. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾರು ಸುವೇಂದು ಅಧಿಕಾರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ಎನ್ ಡಿಎ ನಾಯಕರು ಆಗಮಿಸಿದ್ದರು. ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಸುವೇಂದು ಅಧಿಕಾರಿ ಅವರು ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರನ್ನು ವೇದಿಕೆಗೆ ಸ್ವಾಗತಿಸಿದರು. ಸರ್ಕಾರ್ ಅವರ ಪಾದಗಳನ್ನು ಮುಟ್ಟಿದ ಮೋದಿ ಅವರನ್ನು ಅಪ್ಪಿಕೊಂಡರು. ಸರ್ಕಾರ್ ಅವರು ಪಶ್ಚಿಮ ಬಂಗಾಳದ ಅತ್ಯಂತ ಹಳೆಯ ಬಿಜೆಪಿ ಕಾರ್ಯಕರ್ತರಲ್ಲಿ ಒಬ್ಬರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.