ಪಶ್ಚಿಮಬಂಗಾಳ : ರಾಮನವಮಿ ಮೆರವಣಿಗೆಯ ಸಂದರ್ಭ ಕಲ್ಲುತೂರಾಟ – ಪರಿಸ್ಥಿತಿ ಉದ್ವಿಗ್ನ, ಬಂದೋಬಸ್ತ್

ಪಶ್ಚಿಮಬಂಗಾಳ, ಮಾ. 28 : ರಾಜ್ಯದ ಎರಡು ಕಡೆ ಶುಕ್ರವಾರ ರಾಮನವಮಿ ಮೆರವಣಿಗೆಯ ಸಂದರ್ಭ ಎರಡು ಸಮುದಾಯಗಳ ನಡುವೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಎರಡೂ ಕಡೆಯವರು ಕಲ್ಲು ತೂರಾಟ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ರಘುನಾಥಗಂಜ್‌ನಲ್ಲಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಒಂದು ಸಮುದಾಯದ ಸದಸ್ಯರು ಆರೋಪಿಸಿದರೆ, ಇನ್ನೊಂದು ಸಮುದಾಯದ ಸದಸ್ಯರು ರ್ಯಾಲಿಯ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಪಡೆಗಳನ್ನು ಪ್ರದೇಶದಲ್ಲಿ ನಿಯೋಜಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳು ರೂಟ್ ಮಾರ್ಚ್ ಗಳನ್ನು ನಡೆಸುತ್ತಿದ್ದಾರೆ.

ಪುರುಲಿಯಾದ ಪ್ಯಾರಾದಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, ಸ್ಥಳೀಯ ಅಧಿಕಾರಿಗಳ ಪ್ರಕಾರ, ಅಲ್ಲಿನ ಪರಿಸ್ಥಿತಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ. ರಾಮ ನವಮಿ ರ್ಯಾಲಿಯಲ್ಲಿ ಭಾಗವಹಿಸಲು ಬಂದ ಜನರ ಗುಂಪೊಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಇನ್ನೊಂದು ಸಮುದಾಯದ ಸದಸ್ಯರು ದಾಳಿ ನಡೆಸಿದ್ದಾರೆ ಎಂದು ಪುರುಲಿಯಾದ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ತಿವಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.