WPL 2026 : ಇಂದಿನ ಪಂದ್ಯ ಮುಂಬೈ, ಡೆಲ್ಲಿ, ಯುಪಿ ತಂಡಗಳಿಗೆ ಬಹುಮುಖ್ಯ ಪಂದ್ಯ – ಫಲಿತಾಂಶದ ಮೇಲಿದೆ ಮೂರೂ ತಂಡಗಳ ಎಲಿಮಿನೇಟರ್ ಭವಿಷ್ಯ !

Advertisement

WPL 2026 : ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತದಲ್ಲಿದ್ದು, ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ ಗೆ ಲಗ್ಗೆ ಇಟ್ಟಿದೆ. ಇದೀಗ ಫೈನಲ್ ಹಂತಕ್ಕೇರಲು ಇನ್ನೂ ಕೂಡಾ ಉಳಿದ ನಾಲ್ಕೂ ತಂಡಗಳಿಗೆ ಅವಕಾಶದ ಬಾಗಿಲು ತೆರೆದಿದೆ. ಈಗಾಗಲೇ ಗುಜರಾತ್ ಜೈಂಟ್ಸ್ ತಂಡವು ಎಲಿಮಿನೇಟರ್ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಇದೆ.

Advertisement

ಇಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೀಗ್​ ಹಂತದ ಪಂದ್ಯಗಳು ಮುಗಿದಿರುವುದರಿಂದ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆಯಲು ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದ ಫಲಿತಾಂಶಕ್ಕಾಗಿ ಕಾಯಬೇಕಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್​ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಮುಂಬೈ ಇಂಡಿಯನ್ಸ್​ ಟೂರ್ನಿಯಿಂದ ಹೊರಬೀಳಲಿದೆ. ಅಂದರೆ ಕೊನೆಯ ಪಂದ್ಯದ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಎಮಿನೇಟರ್ ಸುತ್ತಿಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಇಂದಿನ (ಜ.31) ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಲೇಬಾರದು.

Advertisement

ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಫೈನಲ್ ಹಂತಕ್ಕೇರಲು ಯುಪಿ ವಾರಿಯರ್ಸ್ ತಂಡವು ಗೆಲ್ಲಬೇಕು. ಆದರೆ 156 ರನ್​ಗಳಿಗಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲಬಾರದು. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್ 156 ರನ್​ಗಳ ಅಂತರದಿಂದ ಗೆದ್ದರೆ ನೆಟ್​ ರನ್ ರೇಟ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ಮೂಲಕ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪಾಲಿಗೆ ಯುಪಿ ವಾರಿಯರ್ಸ್ ಗೆಲ್ಲಬೇಕು, ಆದರೆ 156 ರನ್​ಗಳ ಅಂತರದಿಂದ ಮಾತ್ರ ಗೆಲ್ಲಬಾರದು.

ಅಂದರೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗೆದ್ದರೆ ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬೀಳಲಿದೆ. ಇನ್ನು ಯುಪಿ ವಾರಿಯರ್ಸ್ ತಂಡವು 156 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಗೆದ್ದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಹೊರಬೀಳಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪಾಲಿಗೆ ಇಂದು ಯುಪಿ ವಾರಿಯರ್ಸ್ ತಂಡವು ಸಾಧಾರಣ ಗೆಲುವು ದಾಖಲಿಸುವುದು ಅನಿವಾರ್ಯ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ಎಲಿಮಿನೇಟರ್​ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬಹುದು.

ಇಂದಿನ ಪಂದ್ಯ ಬಹುಶ: ಮೂರೂ ತಂಡಗಳಿಗೂ ಕೂಡಾ ಬಹುಮುಖ್ಯವಾದ ಗೆಲುವು ಆಗಿದೆ. ಇಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳಿಗೆ ಮೈದಾನದಲ್ಲಿ ಪಂದ್ಯವಾದರೆ, ಮುಂಬೈ ಇಂಡಿಯನ್ಸ್ ತಂಡ ಪಂದ್ಯ ಆಡದೇ ಇದ್ದರೂ ಫಲಿತಾಂಶಕ್ಕಾಗಿ ಕಾಯಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ