ಮೈಸೂರು : ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು – ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ

ಮೈಸೂರು : ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Advertisement

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇದ್ದಿತು, ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿದ್ದವು ಎಂದಿದ್ದಾರೆ. ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ನಂತರ ಮಾಡಿದ ಭಾಷಣದಲ್ಲಿ ಪುರುಷೋತ್ತಮ ಬಿಳಿಮಲೆಯವರು ನೀಡಿದ ಈ ಹೇಳಿಕೆ ಬಾರೀ ವಿವಾದ ಹುಟ್ಟಿಸಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸುತ್ತಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಮುಂದಿನ ವರ್ಷ ಮೇಳವೇ ಕಲಾವಿದರಿಗೆ ಸಿಗುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು ಎಂದರು. ಇಲ್ಲಿ ನಾವು ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹ ಇರುತ್ತಿತ್ತು ಎಂದು ಹೇಳಿದರು. ಈಗ ನಾವು ಹೋಮೋ ಸೆಕ್ಸುವಲ್ ಬಗ್ಗೆ ಮಾತನಾಡುತ್ತೇವೆ, ಬಹಳ ಕೇಳುತ್ತೇವೆ, ಹಿಂದೆ ಅಂತಹ ಮುಕ್ತ ವಾತಾವರಣವಿರಲಿಲ್ಲ. ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಗಳ ಮೇಲೆ ಒತ್ತಡ, ನಾವು ಚಿಕ್ಕವರಿದ್ದಾಗ ನಮ್ಮ ಫಸ್ಟ್ ಕ್ರಶ್ ಗಳು ಸ್ತ್ರೀ ವೇಷಧಾರಿಗಳು, ಈಗ ಸಿನಿಮಾ ನಟ, ನಟಿಯರ ಹೆಸರನ್ನು ಶಾಲೆ-ಕಾಲೇಜಿಗೆ ಹೋಗುವ ಹುಡುಗರು, ಹುಡುಗಿಯರು ಹೇಳುತ್ತಾರೆ, ನಮಗೆ ಆಗ ಇದ್ದದ್ದು ಕ್ರಶ್ ಸ್ತ್ರೀ ವೇಷಧಾರಿಗಳ ಮೇಲೆ. ಅವರು ರಂಗದ ಮೇಲೆ ಬಂದು ಕುಣಿದರೆ ನೋಡಲು ಏನು ಚೆಂದವಿತ್ತು ಎನ್ನುವ ಅವರ ಹೇಳಿಕೆ ವಿವಾದವನ್ನೇ ಸೃಷ್ಟಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.