ಬೆಳ್ತಂಗಡಿ, ಆ. 25 : ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ನಟ ಯಶ್ ಅವರನ್ನು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಬರಮಾಡಿ ಸ್ವಾಗತಿಸಿದರು.
ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಯಶ್, ಸಿನಿಮಾ ಯಶಸ್ವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ರಾಕಿ ಬಾಯ್ ಕಂಡು ಅಭಿಮಾನಿಗಳು ಹರ್ಷೋದ್ಗಾರ ವ್ಯಕ್ತಪಡಿಸಿ ಮುಗಿಬಿದ್ದರು.




