ಕಾರ್ಕಳ : ಯೂತ್ ಕಾಂಗ್ರೆಸ್ ನಾಯಕನಿಗೆ ಕೊಲೆ ಬೆದರಿಕೆ- ಆರೋಪಿಯ ಬಂಧನ

ಕಾರ್ಕಳ, ಅ. 13 : ಕಾರ್ಕಳದ ಯೂತ್ ಕಾಂಗ್ರೆಸ್ ನಾಯಕ ಇನ್ನಾ ಯೋಗೇಶ್ ಆಚಾರ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಚಾರ ಗ್ರಾಮದ ವ್ಯಕ್ತಿಯೊಬ್ಬನನ್ನು ಹೆಬ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೃಷ್ಣ ನಾಯಕ್ ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಬಂಧನದ ಬೆನ್ನಲ್ಲೇ, ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕೃಷ್ಣ ನಾಯಕ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಚಾರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ಕೃಷ್ಣ ನಾಯಕ್, ಈ ಹಿಂದೆ ಕೂಡ ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ಹೊಂದಿದ್ದಾರೆ.

“ಕಾಂಗ್ರೆಸ್ಸಿಗರು ಮುಸ್ಲಿಮರಿಗೆ ಹುಟ್ಟಿದವರು” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರತ್ಯೇಕ ಪ್ರಕರಣ ಕೂಡ ದಾಖಲಾಗಿತ್ತು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಳಗಾವಿ : ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ಹರಿದಿತ್ತು ರಕ್ತ – ಹಬ್ಬದ ದಿನವೇ ಹೆಂಡತಿಗೆ ಚಟ್ಟ ಕಟ್ಟಿದ ಪತಿ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ನಾವೂರು ಕ್ಲಿನಿಕ್ ಗೆ ಬೆಂಕಿ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿರುವ ಶಂಕೆಯಿದೆ – ಗ್ರಾಮಸ್ಥರು