ಬೆಳ್ತಂಗಡಿ : ಜು.12: ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಪ್ರದಾನ ಸಮಾರಂಭ

ಬೆಳ್ತಂಗಡಿ, ಜು. 12 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27 ಕಾರ್ಯಕಾರಿ ಸಮಿತಿಯ ಪದಪ್ರದಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ, ಸಾಂತ್ವನ ನಿಧಿ ಹಸ್ತಾಂತರ, ನೃತ್ಯ ಗಾನ ಸಿಂಚನ ಕಾರ್ಯಕ್ರಮವು ಶ್ರೀ ಗುರು ಸಾನಿಧ್ಯ ಸಭಾಭವನದಲ್ಲಿ ಜು.12 ರಂದು ಬೆಳಗ್ಗೆ 9.30 ರಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement

ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್‌ ಶಿವರಾಮ್‌ ಉದ್ಘಾಟಿಸಲಿದ್ದಾರೆ. ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್‌ ಕುಮಾ‌ರ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಕ್ರಾಂತಿವೀರ (ರಿ.) ಮಂಜ ವೈದ್ಯ ಸಂಸ್ಕರಣಾ ಸಮಿತಿ ಜಿಲ್ಲಾಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.