ಬೆಳ್ತಂಗಡಿ : ಬೆಳ್ತಂಗಡಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಗೌಡ ನೇಮಕ

Advertisement

ಬೆಳ್ತಂಗಡಿ, ಸೆ. 03 : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸವಣಾಲಿನ ನವೀನ್ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದೆ.

Advertisement

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಮಂಜುನಾಥ್ ಅವರು ನವೀನ್ ಗೌಡ ಅವರಿಗೆ ನೇಮಕಾತಿ ಆದೇಶವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ನವಾಜ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ನಗರ ವ್ಯಾಪ್ತಿಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಯುವಜನರನ್ನು ಸಂಘಟನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಪರ್ಕಿಸುವ ನಿಟ್ಟಿನಲ್ಲಿ ನವೀನ್ ಗೌಡ ಅವರ ನೇಮಕ ಮಹತ್ವ ಪಡೆದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ