ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕ – ಕುಸಿದು ಬಿದ್ದು ಮೃತ್ಯು

ಕಾರ್ಕಳ, ಫೆ. 21 : ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಯರ್ಲಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಯರ್ಲಪಾಡಿ ಗ್ರಾಮದ ಹೇಮಲತಾ ಎಂಬವರ ಮಗ ಸುಹೇಶ್(22) ಎಂದು ಗುರುತಿಸಲಾಗಿದೆ.

Advertisement

ಕಳೆದ 15 ದಿನಗಳಿಂದ ಕೆಮ್ಮುವಿನಿಂದ ಬಳಲುತ್ತಿದ್ದ ಇವರು ಔಷಧಿ ಸೇವಿಸುತ್ತಿದ್ದರು. ಫೆ.19ರಂದು ಮಧ್ಯಾಹ್ನ ಮನೆಯ ಡೈನಿಂಗ್ ರೂಮ್‌ನ ಕುರ್ಚಿಯಲ್ಲಿ ಕುಳಿತು ಕೊಂಡಿದ್ದ ಸುಹೇಶ್, ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ ಬಿದ್ದರೆನ್ನಲಾಗಿದೆ.

ಬಳಿಕ ನರಳಾಡಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕಾರ್ಕಳದ ಖಾಸಗಿ ಆಸ್ಫತ್ರೆಗೆ ಕರೆದುಕೊಂಡು ಹೋದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಸುಹೇಶ್ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.