ಗುರುವಾಯನಕೆರೆ : ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ – ಕೊಲೆ ಶಂಕೆ ?

ಗುರುವಾಯನಕೆರೆ, ಜೂ. 01 : ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್(32) ಎಂಬಾತನ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟ‌ರ್ ಸಿಕಂದರ್ ಪಾಷ ಮತ್ತು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.