ಮಂಗಳೂರು : ಚರಂಡಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ – ಕೊಲೆ ಶಂಕೆ !

Advertisement

ಮಂಗಳೂರು, ಜೂ. 10 : ಇಲ್ಲಿನ ಜೋಕಟ್ಟೆಯಲ್ಲಿ ಯುವಕನೋರ್ವನ ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನೆಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Advertisement

ಎಂಆರ್ ಪಿಎಲ್ ನಿಂದ ಸುರತ್ಕಲ್ ತೆರಳುವ ರಸ್ತೆಯಲ್ಲಿನ ಜೋಕಟ್ಟೆ ತೆರಳುವ ಸಣ್ಣ ಮೇಲ್ಸೇತುವೆ ಬಳಿಯ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ.

Advertisement

ಮೃತದೇಹದಿಂದ ಒಂದೂವರೆ ಮೀಟರ್ ದೂರದಲ್ಲಿರುವ ಮನೆಯೊಂದರ ಗೇಟ್ ಬಳಿ ರಕ್ತದ ಕಲೆಗಳು ಪತ್ತೆಯಾಗಿದ್ದು, ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಪಣಂಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ