ಬೆಂಗಳೂರು : ಬಾಡಿಗೆ ಮನೆಯಲ್ಲಿ ಬೆತ್ತಲೆ ಹಾಗೂ ಕೊಳೆತ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆ

ಬೆಂಗಳೂರು, ಏ. 28 : ಬಾಡಿಗೆ ಮನೆಯಲ್ಲಿ ಬೆತ್ತಲೆ ಹಾಗೂ ಕೊಳೆತ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ.

Advertisement

ಪೂಜಾ ದತ್ತಾ ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಪೂಜಾ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದಳು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೂಜಾ ದತ್ತಾ ಜಾರ್ಖಂಡ್ ಮೂಲದವಳು. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ವಾಸವಿದ್ದಳು. ಈ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು. ಸದ್ಯ ಎಲ್ಲೂ ಕೆಲಸ ಮಾಡ್ತಿರಲಿಲ್ಲ ಅನ್ನೋದು ಗೊತ್ತಾಗಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್ ಪತ್ತೆಯಾಗಿದೆ. ರೂಂನಲ್ಲಿ ಬೆತ್ತಲೆಯಾಗಿ ಪೂಜಾ ಮೃತದೇಹ ಬಿದ್ದಿದೆ. ರೂಂ ತುಂಬಾ ಕೆಲ ಪೇಪರ್‌ಗಳು ಹರಿದಾಕಿರೋದು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ದುರ್ವಾಸನೆಯಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಶಿಫ್ಟ್ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಪೊಲೀಸರು ರವಾನೆ ಮಾಡಿದ್ದಾರೆ. ಆತ್ಮಹತ್ಯೆ ಅಥವಾ ಕೊಲೆ ಶಂಕೆ ವ್ಯಕ್ತವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.