ಮುಸ್ಲಿಂ ಲೀಗ್ ಅಭ್ಯರ್ಥಿ ಯುವತಿ, ಬಿಜೆಪಿ ಕಾರ್ಯಕರ್ತನ ಜತೆ ಪರಾರಿ !

ಕಾಸರಗೋಡು, ಡಿ. 11 : ಸ್ಥಳೀಯ ಆಡಳಿತ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಲೀಗ್ ಅಭ್ಯರ್ಥಿ ಯುವತಿ ಮೂರು ದಿನದಿಂದ ನಾಪತ್ತೆಯಾಗಿದ್ದು, ಚುನಾವಣೆ ಮುನ್ನಾ ದಿನವಾದ ಬುಧವಾರ ತನ್ನ ಪ್ರಿಯತಮನಾಗಿರುವ ಬಿಜೆಪಿ ಕಾರ್ಯಕರ್ತನ ಜತೆ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾಳೆನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಪೊಲೀಸರು ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆತನೊಂದಿಗೆ ಹೋಗುವ ಇಂಗಿತ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಜತೆಯಾಗಿ ತೆರಳಿದ್ದಾರೆ. ಕಣ್ಣೂರು ಜಿಲ್ಲೆಯ ಚೋಕ್ಲಿ ಗ್ರಾಮ ಪಂಚಾಯಿತಿಯಲ್ಲಿ ಘಟನೆ ನಡೆದಿದೆ. ಗ್ರಾಪಂ9ನೇ ವಾರ್ಡ್ ನ ಮುಸ್ಲಿಂ ಲೀಗ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಟಿ.ಪಿ. ಅರುವಾ (29) ನಾಪತ್ತೆ ಪ್ರಕರಣ ಚರ್ಚೆಗೆ ಕಾರಣವಾಗಿತ್ತು. ಆಕೆಯನ್ನು ಸಿಪಿಎಂ ಕಾರ್ಯಕರ್ತರು ಅಪಹರಿಸಿ ದಿಗ್ಭಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ಐಕ್ಯರಂಗ ಪ್ರತಿಭಟನೆ ನಡೆಸಿತ್ತು. ಯುವತಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಘಟನೆಯಲ್ಲಿ ತಮಗೆ ಯಾವುದೇ ನಂಟಿಲ್ಲವೆಂದು ಸಿಪಿಎಂ ಸ್ಪಷ್ಟನೆ ನೀಡಿತ್ತು. ಈ ಮಧ್ಯೆ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣಕ್ಕೆ ತಿರುವು ಲಭಿಸಿದ್ದು, ಆಕೆ ಬಿಜೆಪಿ ಕಾರ್ಯಕರ್ತನಾದ ತನ್ನ ಸ್ನೇಹಿತನ ಜತೆ ತೆರಳಿರುವುದಾಗಿ ತಿಳಿದುಬಂದಿತ್ತು. ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದ ಮುಸ್ಲಿಂ ಲೀಗ್ ಅಭ್ಯರ್ಥಿ ನಾಪತ್ತೆ ಪ್ರಕರಣ ಸುಖಾಂತ್ಯಗೊಂಡಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.