ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ 8ನೇ ವರ್ಷದ `ಪರ್ಬ’ ಸಾಮೂಹಿಕ ದೀಪಾವಳಿ ಆಚರಣೆ

ಬೆಳ್ತಂಗಡಿ, ನ. 07 : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ 8ನೇ ವರ್ಷದ `ಪರ್ಬ’ ಸಾಮೂಹಿಕ ದೀಪಾವಳಿ ಆಚರಣೆಯನ್ನು ಆಯೋಜಿಸಲಾಗಿದೆ.

ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ, ಶ್ರೀ ಕೃಷ್ಣ ಮಹಿಳಾ ಸಮಿತಿ ಪಣಕಜೆ ಹಾಗೂ ಧ್ವನಿ ನ್ಯೂಸ್ ಚಾನೆಲ್ ಇವರ ಸಹಕಾರದೊಂದಿಗೆ ನವೆಂಬರ್7 ರಂದು ಶನಿವಾರ ಪಣಕಜೆಯ ಶ್ರೀ ಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಈ ಕಾರ್ಯಕ್ರಮ ಜರುಗಲಿದೆ.

ತುಳುನಾಡಿನ ವಿಶಿಷ್ಟ ಹಬ್ಬವಾದ `ತುಡರ್ ಪರ್ಬ’ ದೀಪಾವಳಿಯ ಪ್ರಮುಖ ಆಕರ್ಷಣೆಯಾಗಲಿದೆ. ಈ ಪರ್ಬಕ್ಕೆ ಇನ್ನಷ್ಟು ಮೆರುಗು ನೀಡುವ ಸಲುವಾಗಿ ಈ ಬಾರಿ 1001 ಮಣ್ಣಿನ ಹಣತೆಗಳನ್ನು ಸಾಮೂಹಿಕವಾಗಿ ಬೆಳಗಿಸುವ ಮೂಲಕ ಇಡೀ ಪರಿಸರವನ್ನು ದೀಪಮಯಗೊಳಿಸಲು ಯುವವಾಹಿನಿ ಸಿದ್ಧತೆ ನಡೆಸಿದೆ. ಕತ್ತಲನ್ನು ಕಳೆದು ಬೆಳಕಿನೆಡೆಗೆ ಸಾಗುವ ಈ ದೀಪ ಬೆಳಗುವ ಕಾರ್ಯಕ್ರಮ ಕಣ್ಮನ ಸೆಳೆಯಲಿದೆ.

ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು:

ಸಾಮೂಹಿಕ ದೀಪಾವಳಿ ಆಚರಣೆಯ ಅಂಗವಾಗಿ ಸಾರ್ವಜನಿಕರಿಗಾಗಿ, ಮಕ್ಕಳಿಗಾಗಿ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಕರ್ಷಕ ಗೂಡುದೀಪ ಸ್ಪರ್ಧೆ: ತಮ್ಮ ಕೈಚಳಕದಿಂದ ತಯಾರಿಸಿದ ಗೂಡುದೀಪಗಳನ್ನು ಪ್ರದರ್ಶಿಸಲು ಅವಕಾಶವಿದೆ. ದೀಪಾವಳಿಯ ಸಂಭ್ರಮವನ್ನು ಹೆಚ್ಚಿಸುವ ರಂಗೋಲಿ ಸ್ಪರ್ಧೆಯಿದೆ.

ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು:

ದೀಪಾವಳಿಯ ಪವಿತ್ರ ಅಂಗವಾಗಿ ಗೋಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಭಕ್ತಿ ರಸವನ್ನು ಹರಿಸುವ, ಜನರ ಗಮನ ಸೆಳೆಯುವ ವಿಶೇಷ ಭಜನಾ ಕಾರ್ಯಕ್ರಮವಿದೆ. ಸಂಜೆ ೫ ಗಂಟೆಯಿಂದ ತುಳುನಾಡಿನ ಕವಿಗಳು ಕವಿತೆಗಳನ್ನು ಹಾಡುವ ಮೂಲಕ ಪ್ರಸ್ತುತಪಡಿಸುವ ವಿಶಿಷ್ಟ ಕವಿಗೋಷ್ಠಿ `ಕಬಿಕೂಟ’ ಕಾರ್ಯಕ್ರಮವು ಈ ಬಾರಿಯ ಪ್ರಮುಖ ಆಕರ್ಷಣೆಯಾಗಿದೆ.

ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ `ಪರ್ಬ’ ಆಚರಣೆಯನ್ನು ಮಾಡಿಕೊಂಡು ಬರುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕ, ಈ ಬಾರಿ ೮ನೇ ವರ್ಷವನ್ನು ಇನ್ನಷ್ಟು ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಈ ಕಾರ್ಯಕ್ರಮಕ್ಕೆ ಪಣಕಜೆ, ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !